LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಯಾಕೆ ಬಿಜೆಪಿ ಮಾತನಾಡುತ್ತಿಲ್ಲ : ಡಿಸಿಎಂ

Advertisement

ಬೆಳಗಾವಿ: ನಾವು ಅಧಿವೇಶನ ಕರೆದಿರುವುದೇ ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು. ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ ಯಾಕೆ? ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ.


ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಕೇಲುತ್ತಿಲ್ಲ ಯಾಕೆ?ಎಂದರು.

ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ನಮಗೆ ಬದ್ಧತೆ ಇದೆ. ಕೇಂದ್ರ ಸರ್ಕಾರ ಜಿಎಸ್ ಟಿ ಪರಿಷ್ಕರಣೆ ಮೂಲಕ ರಾಜ್ಯದ ಆದಾಯ ಕಡಿಮೆ ಮಾಡಿದೆ. ವಾರ್ಷಿಕ 10-15 ಸಾವಿರ ಕೋಟಿ ಕೊರತೆಯಾಗಿದೆ. ನಾವು ಕೊಟ್ಟ ಮಾತಿಗೆ ಬದ್ಧವಾಗಿದ್ದೇವೆ. ಒಂದೆರಡು ತಿಂಗಳು ಹೆಚ್ಚು ಕಮ್ಮಿಯಾಗಲಿದೆ.

ಬಿಜೆಪಿಯವರು ಬೇರೆ ರಾಜ್ಯಗಳಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಿ. ಕೇಂದ್ರ ಸರ್ಕಾರ ರಾಜ್ಯದ ನೀರಾವರಿ ಯೋಜನೆಗೆ ಘೋಷಿಸಿದ ಅನುದಾನ ಇಲ್ಲಿಯವರೆಗೂ ಕೊಟ್ಟಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ನೀಡಿಲ್ಲ, ಮಹದಾಯಿ ವಿಚಾರವಾಗಿ ಅನುಮತಿ ನೀಡಿಲ್ಲ, ಬಿಜೆಪಿ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ? ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸಿಲ್ಲ. ಇವುಗಳ ಬಗ್ಗೆ ಯಾಕೆ ಅವರು ಮಾತನಾಡುತ್ತಿಲ್ಲ? ಎಂದು ಪ್ರಶ್ನಿಸಿದರು.

ದ್ವೇಷ ಭಾಷಣ ನಿಷೇಧ ಕಾಯ್ದೆ ಬಗ್ಗೆ ನಮ್ಮದು ನಾಗರಿಕ ಸಮಾಜ. ಇಲ್ಲಿ ದ್ವೇಷ ಮಾಡಬಾರದು. ದ್ವೇಷ, ಗಲಾಟೆ ಮೂಲಕ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ಕಾನೂನು ತರಲಾಗುತ್ತಿದೆ. ಇದರಿಂದ ರಾಜ್ಯ ಹಾಗೂ ಸಮಾಜಕ್ಕೆ ಒಳ್ಳೆಯದಾಗಲಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST