LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹೆಂಡತಿ, ನಾದಿನಿಯನ್ನ ಬರ್ಬರವಾಗಿ ಹತ್ಯೆಗೈದ ಗಂಡ 

Advertisement

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಇಬ್ಬರು ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಕುಟುಂಬ ಕಲಹದ ಹಿನ್ನೆಲೆ ಈ ದುರ್ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಕುಟುಂಬ ಕಲಹದ ಶಂಕೆ ನಡುವೆ ಪತ್ನಿ ಹಾಗೂ ನಾದಿನಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 

ಮೃತರನ್ನು ರೇಷ್ಮಾ (21) ಮತ್ತು ಶಮ್ಮಾ (25) ಎಂದು ಗುರುತಿಸಲಾಗಿದ್ದು, ಶಮ್ಮಾ ಅವರ ಪತಿಯೇ ಗಾಂಜಾ ನಶೆಯಲ್ಲಿದ್ದ ವೇಳೆ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಚಿಂತಾಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಮೃತರನ್ನು ರೇಷ್ಮಾ (21) ಹಾಗೂ ಶಮ್ಮಾ (25) ಎಂದು ಗುರುತಿಸಲಾಗಿದೆ. ಇವರಲ್ಲಿ ಶಮ್ಮಾ ಪತ್ನಿಯಾಗಿದ್ದು, ರೇಷ್ಮಾ ನಾದಿನಿಯಾಗಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಕುಟುಂಬ ಕಲಹವೇ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಶಮ್ಮಾ ಅವರ ಪತಿಯೇ ಗಾಂಜಾ ನಶೆಯಲ್ಲಿದ್ದ ವೇಳೆ ಇಬ್ಬರನ್ನೂ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಪೊಲೀಸರು ಇನ್ನೂ ಅಧಿಕೃತ ಮಾಹಿತಿ ನೀಡಿಲ್ಲ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿಂತಾಮಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಆರೋಪಿ ಪತಿ ಪೊಲೀಸರಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದನ್ನು ತಿಳಿಯಲು ತನಿಖೆ ಮುಂದುವರಿದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ