LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈಶ್ವರ್ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಮಹಿಳೆಯರ ವಿಶೇಷ ಪೂಜೆ, ಮನವಿ

Advertisement

ಭಾಲ್ಕಿ  : ತಾಲೂಕಿನ ಹಲ್ಬರ್ಗಾ ಗ್ರಾಮದ ಭಜನಾ ಮಂಡಳಿಯ ಅಧ್ಯಕ್ಷೆ ಸರಸ್ವತಿ ಪ್ರಭಾ ಅವರ ನೇತೃತ್ವದಲ್ಲಿ ಮಹಿಳಾ ಶಕ್ತಿ ಸಂಘದ ತಾಯಂದಿರು ಕ್ಷೇತ್ರದ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ Eshwar Khandre ಅವರಿಗೆ ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಹಿಳೆಯರು, ರಾಜ್ಯ ರಾಜಕಾರಣದಲ್ಲಿ ಈಶ್ವರ್ ಖಂಡ್ರೆ ಅವರು ಸಲ್ಲಿಸಿರುವ ಸೇವೆ, ಪಕ್ಷ ಸಂಘಟನೆಗೆ ನೀಡಿರುವ ಕೊಡುಗೆ ಹಾಗೂ ಜನಪರ ಕಾರ್ಯಗಳನ್ನು ಪರಿಗಣಿಸಿ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯದ ಅಭಿವೃದ್ಧಿ ಹಾಗೂ ಹೈದರಾಬಾದ್-ಕರ್ನಾಟಕ ಭಾಗದ ಜನರ ಆಶೋತ್ತರಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈಶ್ವರ್ ಖಂಡ್ರೆ ಅವರಿಗೆ ಉನ್ನತ ಸ್ಥಾನಮಾನ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಲಲಿತಾ ಪ್ರಭಾ, ಸಂಪಾವತಿ ಬಿರಾದಾರ, ಕಸ್ತೂರಬಾಯಿ ಬಿರಾದಾರ, ಬೇಬಾವತಿ ಕುಂಬಾರ, ಶಕುಂತಲಾ ಗುಮತ್ತಾ ಸೇರಿದಂತೆ ಅನೇಕ ಮಹಿಳೆಯರು ಉಪಸ್ಥಿತರಿದ್ದು, ನೂತನ ಸರ್ಕಾರ ರಚನೆ ಮಾಡುತ್ತಿರುವ ನಿಯೋಜಿತ ಮುಖ್ಯಮಂತ್ರಿ D. K. Shivakumar ಅವರು ಈಶ್ವರ್ ಖಂಡ್ರೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಜಿಲ್ಲೆ ಹಾಗೂ ಪ್ರದೇಶದ ಜನರ ಆಶಯವನ್ನು ಈಡೇರಿಸಬೇಕು ಎಂದು ಮನವಿ ಮಾಡಿದರು.

ವರದಿ : ಸಂತೋಷ ಬಿಜಿ ಪಾಟೀಲ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ